ಪ.ಪೋ.ಅ-1. ಸ್ವಾಮಿ ವಿವೇಕಾನಂದರ ಚಿಂತನೆಗಳು
ಒಂದು ಅಂಕದ ಪ್ರಶ್ನೆಗಳು
ಉತ್ತರ : ವಿವೇಕಾನಂದರು ಸಾಮಾಜಿಕ ಸಂಕಟ, ಸಿಟ್ಟು, ಸ್ಪೋಟ, ಸ್ಪಷ್ಟತೆಗಳ ರೂಪಕ.
ಉತ್ತರ : ವಿವೇಕಾನಂದರು ಬಡಜನರ ಹೊಟ್ಟೆ (ದೈಹಿಕ) ಹಸಿವನ್ನು ಹಿಂಗಿಸುವುದಕ್ಕೆ ಮೊದಲ ಆದ್ಯತೆ ನೀಡಿರುವರು.
ಉತ್ತರ : ವಿವೇಕಾನಂದರು ಧಾರ್ಮಿಕ ಮೂಲಭೂತವಾದಕ್ಕೆ ಉಗ್ರ ವಿರೋಧಿಯಾಗಿದ್ದರು.
ಉತ್ತರ : ಜಾತಿವಾದ ಮತ್ತು ಕೋಮುವಾದಗಳು ಮಾನವೀಯ ಮೌಲ್ಯವನ್ನು ನುಂಗಿ ನೊಣೆಯುತ್ತಿವೆ.
ಉತ್ತರ : ವಿವೇಕಾನಂದರಿಗೆ ಹಿಂದುಳಿದ ಮತ್ತು ದಲಿತ ಜಾತಿಗಳ ಬಗ್ಗೆ ಸಾಮಾಜಿಕ ಕಳಕಳಿಯಿತ್ತು.
ಉತ್ತರ : ವಿವೇಕಾನಂದರು ಜಾತಿ ಮತ್ತು ವರ್ಗ ವ್ಯವಸ್ಥೆಯನ್ನು ವಿರೋಧಿಸಿದರು.
ಉತ್ತರ : ಶೂದ್ರರು, ಅಸ್ಪೃಶ್ಯರು ಜಾತಿ ವ್ಯವಸ್ಥೆಯ ಕ್ರೌರ್ಯಕ್ಕೆ ತುತ್ತಾಗಿದ್ದಾರೆ.
ಉತ್ತರ : ವಿವೇಕಾನಂದರು ಶೂದ್ರವರ್ಗ ತನ್ನ ‘ಊಳಿಗ ಸ್ವಭಾವವನ್ನು ಬಿಟ್ಟು ಹೊರಬರಬೇಕೆಂದು’ ಕರೆಕೊಡುತ್ತಾರೆ.
ಉತ್ತರ : ಅಮೇರಿಕಾದ ಚಿಕಾಗೊದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಿತು.
ಉತ್ತರ : 11ನೆಯ ಸೆಪ್ಟೆಂಬರ್ 1893 ರಂದು ಚಿಕಾಗೊ ಸರ್ವಧರ್ಮ ಸಮ್ಮೇಳನ ನಡೆಯಿತು.
ಉತ್ತರ : ಪ್ರತಿಯೊಬ್ಬರು ಒಂದೇ ಮಾರ್ಗವನ್ನು ಅನುಸರಿಸುವ ದಿನ ಧರ್ಮ ಮತ್ತು ಆಧ್ಯಾತ್ಮಿಕ ಭಾವನೆ ನಾಶವಾಗುವುದು.
ಉತ್ತರ : ವಿವೆಕಾನಂದರು ಏಕಧರ್ಮ ಶ್ರೇಷ್ಠತೆ ಮತ್ತು ವಿಸ್ತರಣೆಯು ಜೀವವಿರೋಧವೆಂದು ಭಾವಿಸಿದ್ದರು.
ಉತ್ತರ : ಕೋಮುವಾದವು ಏಕಧರ್ಮ ಮತ್ತು ಏಕಸಂಸ್ಕೃತಿಯೇ ಶ್ರೇಷ್ಠವೆಂದು ನಂಬಿಸುವುದು.
ಉತ್ತರ : ವಿವೇಕಾನಂದರನ್ನು ‘ಮಾನವತಾಮಿತ್ರ’ರೆಂದು ಕರೆದವರು ಕವಿ ಕುವೆಂಪುರವರು.
ಉತ್ತರ : ಕ್ರೈಸ್ತ, ಬುದ್ಧ, ಕೃಷ್ಣ, ರಾಮರೆಲ್ಲರು ಅಹಮಸ್ಮಿ ಎಂಬ ಮಹಾವಾರಿಧಿಯ ತರಂಗಗಳು.
ಮೂರು ಅಥವಾ ನಾಲ್ಕು ವಾಕ್ಯಗಳಲ್ಲಿ ಬರೆಯಿರಿ ( 2 ಅಂಕದ ಪ್ರಶ್ನೆಗಳು )
ಉತ್ತರ : ದೈಹಿಕ ಹಸಿವನ್ನು ಹಿಂಗಿಸುವುದು ಸ್ವಾಮಿ ವಿವೇಕಾನಂದರ ಮೊದಲ ಆದ್ಯತೆಯಾಗಿತ್ತು. ಆನಂತರ ಆತ್ಮದ ಹಸಿವು, ವೇದಾಂತದ ಹಸಿವು, ಸಾಂಸ್ಥಿಕವಾದ ಧರ್ಮದ ಹಸಿವುವಾಗಿತ್ತು. ಈ ಕಾರಣದಿಂದ ಸ್ವಾಮಿ ವಿವೇಕಾನಂದರು ಧಾರ್ಮಿಕ ಮೂಲಭೂತವಾದಿಯಾಗಿರಲಿಲ್ಲ.
ಉತ್ತರ : ವಿವೇಕಾನಂದರು ಯಾವತ್ತೂ ಧಾರ್ಮಿಕ ಮೂಲಭೂತವಾದಿಯಾಗಿರಲಿಲ್ಲ. ಬದಲಾಗಿ ಧಾರ್ಮಿಕ ಮೂಲಭೂತವಾದಕ್ಕೆ ಉಗ್ರ ವಿರೋಧಿಯಾಗಿದ್ದರು. ಜಾತಿವಾದ ಮತ್ತು ಕೋಮುವಾದಕ್ಕೆ ಪ್ರತಿರೋಧವೊಡ್ಡಿದರು. ಹಿಂದೂಧರ್ಮದೊಳಗಿದ್ದೂ ಅದನ್ನು ಮೀರಿದ ಸಾಮಾಜಿಕ ಶಕ್ತಿಯಾದರು. ಆದ್ದರಿಂದ ಇಂದಿನ ಸನ್ನಿವೇಶದಲ್ಲಿ ಅವರು ಹೆಚ್ಚು ಪ್ರಸ್ತುತರು.
ಉತ್ತರ : ವಿವೇಕಾನಂದರಿಗೆ ಹಿಂದುಳಿದ ಹಾಗೂ ದಲಿತ ಜಾತಿಗಳ ಬಗ್ಗೆ ಅವರಿಗೆ ಸಹಜವಾದ ಸಾಮಾಜಿಕ ಕಳಕಳಿಯಿತ್ತು. ಹೀಗಾಗಿಯೇ ಅವರು ಸಂಶಯಕ್ಕೆಡೆಯಿಲ್ಲದಂತೆ ಜಾತಿ ಮತ್ತು ವರ್ಗ ವ್ಯವಸ್ಥೆಯನ್ನು ವಿರೋಧಿಸಿದರು. ಅವರು “ಜಾತಿ ಎಂಬುದು ಸಮಾಜದ ಒಂದು ಆಂತರಿಕ ಭಾಗವಾಗಿದೆ. ಹಿಂದೆ ಅದು ವಿಕಾಸವಾಗುತ್ತಿತ್ತು. ಈಗ ಅದು ಘನೀಭೂತವಾಗಿದೆ. ಅದರ ದುರ್ಗಂಧದಿಂದ ಭಾರತದ ವಾತಾವರಣವೆಲ್ಲ ತುಂಬಿದೆ. ಜಾತಿ ವ್ಯವಸ್ಥೆಯ ಕ್ರೌರ್ಯಕ್ಕೆ ತುತ್ತಾಗಿ ಶೂದ್ರರು, ಅಶ್ಪøಷ್ಯರು ಸ್ವಾತಂತ್ರ್ಯಹೀನರಾಗಿ ಗುಲಾಮತನ ಅನುಭವಿಸುತ್ತಿದ್ದಾರೆ” ಎಂಬುದು ಜಾತಿ ವ್ಯವಸ್ಥೆಯ ಬಗ್ಗೆ ಸ್ವಾಮಿ ವಿವೇಕಾನಂದರ ಅಭಿಪ್ರಾಯವಾಗಿದೆ.
ಉತ್ತರ : ವಿವೇಕಾನಂದರು ಶೂದ್ರವರ್ಗ ತನ್ನ ‘ಊಳಿಗ ಸ್ವಭಾವ’ವನ್ನು ಬಿಟ್ಟು ಹೊರಬರಬೇಕೆಂದು ಕರೆಕೊಡುತ್ತಾರೆ. ಮುಂದೊಮ್ಮೆ ಶೂದ್ರರು ತಮ್ಮ ಶೂದ್ರತ್ವದ ಶಕ್ತಿಯಿಂದಲೇ ಮೇಲೇಳುವ ಕಾಲಬರುತ್ತದೆ ಎಂದು ಭಾವಿಸುತ್ತಾರೆ ಮತ್ತು ವಿಶೇಷವೆಂದರೆ, ಮುಂದೆ ಬರುವುದು “ಸಮತವಾದ, ಅರಾಜಕವಾದ, ಶೂನ್ಯವಾದಗಳು ಮತ್ತು ಮುಂದಾಗಲಿರುವ ಸಮಾಜ ಕ್ರಾಂತಿಯ ಅರುಣೋದಯ” ಎಂದು ಘೋಷಿಸಿದ್ದಾರೆ.
ಉತ್ತರ : ವಿವೇಕಾನಂದರೆಂದೂ ಏಕಸಂಸ್ಕೃತಿ ಮತ್ತು ಏಕ ಧರ್ಮ ವಿಸ್ತರಣೆಗಳ ಪರವಾಗಿರಲಿಲ್ಲ. ಅದು ಹಿಂದೂ ಧರ್ಮವಿರಲಿ, ಕ್ರೈಸ್ತ ಧರ್ಮವಿರಲಿ, ಇಸ್ಲಾಂ ಧರ್ಮವಿರಲಿ, ಏಕಧರ್ಮ ಶ್ರೇಷ್ಠತೆ ಮತ್ತು ವಿಸ್ತರಣೆಯು ಜೀವವಿರೋಧವೆಂದು ಅವರು ಭಾವಿಸಿದ್ದರು. ಕೋಮುವಾದವು ಏಕಧರ್ಮ ಮತ್ತು ಏಕಸಂಸ್ಕೃತಿಯೇ ಶ್ರೇಷ್ಠವೆಂದೂ ಅದೇ ಅಂತಿಮವೆಂದೂ ನಂಬುತ್ತ ನಂಬಿಸುತ್ತ, ಪರಮಧರ್ಮ ದ್ವೇಷವನ್ನು ಬಿತ್ತಿ ಬೆಳೆಸುತ್ತದೆ. ಇಂತಹ ಪ್ರವೃತ್ತಿಗೆ ಸ್ವಾಮಿ ವಿವೇಕಾನಂದರು ಕಟ್ಟಾ ವಿರೋಧಿಯಾಗಿದ್ದರು.
ಉತ್ತರ : ವಿವೇಕಾನಂದರು ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ “ಸ್ವಮತಾಭಿಮಾನ, ಅನ್ಯ ಮತದ್ವೇಷ ಮತ್ತು ಇವುಗಳಿಂದ ಉತ್ಪನ್ನವಾದ ಘೋರ ಧಾರ್ಮಿಕ ದುರಭಿಮಾನಗಳು ಈ ಸುಂದರ ಜಗತ್ತನ್ನು ಆವರಿಸಿಕೊಂಡಿವೆ... ಇಂತಹ ಉಗ್ರ ಧರ್ಮಾಂಧತೆಯ ದೈತ್ಯರಿಲ್ಲದೆ ಇದ್ದರೆ ಮಾನವ ಜನಾಂಗ ಇಂದಿಗಿಂತ ಎಷ್ಟೋ ಮುಂದುವರೆಯುತ್ತಿತ್ತು” ಎಂದು ಹೇಳಿದರು.
ಉತ್ತರ : ಸ್ವಾಮಿ ವಿವೇಕಾನಂದರು “ಪ್ರತಿಯೊಬ್ಬರೂ ಒಂದೇ ಮಾರ್ಗವನ್ನು ಅನುಸರಿಸುವ ದುರ್ದಿನ ಪ್ರಪಂಚಕ್ಕೆ ಬರಕೂಡದು ಎನ್ನುತ್ತಾರೆ. ಹಾಗೆ ಬಂದರೆ ಆಗ ಧರ್ಮ ಮತ್ತು ಆಧ್ಯಾತ್ಮಿಕ ಭಾವನೆ ನಾಶವಾಗುವುದು. ವೈವಿಧ್ಯವೇ ಜೀವನದ ರಹಸ್ಯವಾಗಿರುವುದರಿಂದ ನಾವು ಎಲ್ಲ ಧರ್ಮಗಳಿಗೂ ಗೌರವವನ್ನು ತೋರಬೇಕು” ಎಂದು ಅಭಿಪ್ರಾಯಪಡುತ್ತಾರೆ.
ಉತ್ತರ : ಸ್ವಾಮಿ ವಿವೇಕಾನಂದರು ಮನುಷ್ಯತ್ವದ ಮಹಿಮೆಯನ್ನು ಕುರಿತು ‘‘ಮನುಷ್ಯತ್ವದ ಮಹಿಮೆಯನ್ನು ಎಂದಿಗೂ ಮರೆಯಬೇಡಿ. ನಮಗಿಂತಲೂ ಬೇರೆಯಾದ ದೇವರು ಹಿಂದೆ ಇರಲಿಲ್ಲ. ಮುಂದೆ ಬರುವುದಿಲ್ಲ. ಕ್ರೈಸ್ತ, ಬುದ್ಧ, ಕೃಷ್ಣ, ರಾಮರೆಲ್ಲ ಅಹಮಸ್ಮಿ ಎಂಬ ಮಹಾವಾರಿಧಿಯ ತರಂಗಗಳು ಮಾತ್ರ’’ ಎಂದು ಘೋಷಿಸಿದರು.
ಉತ್ತರ : ವಿವೇಕಾನಂದರ ‘ಧಿರೋದಾತ್ತ’ ನಿಲುವುಗಳು ವೈಯಕ್ತಿಕ ಮಾತ್ರವಾಗದೆ ಸಾಮಾಜಿಕವಾಗಿ ರೂಪಾಂತರಗೊಂಡು ಗಟ್ಟಿಯಾದದ್ದೇ ಅವರ ವ್ಯಕ್ತಿತ್ವದ ವಿಶೇಷ. ಅವರದು ಪ್ರಖರ ಸಾಮಾಜಿಕ ವ್ಯಕ್ತಿತ್ವ, ದೀನ ದಲಿತರ ಉದ್ಧಾರವೇ ಅವರ ಧರ್ಮದ ಮೊದಲ ತತ್ವ. ಅದೇ ಅವರ ವೈಚಾರಿಕ ಸತ್ವ. ಆದ್ದರಿಂದ ಸ್ವಾಮಿ ವಿವೇಕಾನಂದರು ಇಂದಿಗೂ ಸತ್ಯ.
« BACK ಮುಂದಿನ ಅಧ್ಯಾಯ
THANK URMH-9731734068
142311291
ಪ್ರತ್ಯುತ್ತರಅಳಿಸಿVijay Rathod
ಪ್ರತ್ಯುತ್ತರಅಳಿಸಿ